Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:2 - ಪರಿಶುದ್ದ ಬೈಬಲ್‌

2 ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್, ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ, ಘಟ್‍ಮನಾಚೊ, ಸಗ್ಳ್ಯಾ ರಿತಿನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಬರ್‍ಯಾ ಗುನಾಚೊ ಮಾನುಸ್ ರ್‍ಹಾವ್ಚೊ. ವಳಕ್ ನಸಲ್ಲ್ಯಾಕ್ನಿ ಸೈತ್ ಅಪ್ನಾಚ್ಯಾ ಘರಾಕ್ ಬಲ್ವುನ್ ತೆಂಚಿ ಯವಸ್ತಾ ಕರ್‍ತಲೊ; ದುಸ್ರ್ಯಾಕ್ನಿ ಬರ್‍ಯಾ ಗೊಸ್ಟಿಯಾ ಸಿಕ್ವುತಲೊ ಗುನ್ ಬಿ ತೆಕಾ ರ್‍ಹಾವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:2
20 ತಿಳಿವುಗಳ ಹೋಲಿಕೆ  

ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ವಿಧವೆಯರ ಪಟ್ಟಿಗೆ ಸೇರಿಸಲ್ಪಟ್ಟ ವಿಧವೆಯರು ವಯಸ್ಸಿನಲ್ಲಿ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಅವಳು ತನ್ನ ಗಂಡನಿಗೆ ನಂಬಿಗಸ್ತಳಾಗಿದ್ದವಳೆಂದೂ


ಗುಣುಗುಟ್ಟದೆ ಅತಿಥಿಸತ್ಕಾರ ಮಾಡಿರಿ.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ವೃದ್ಧರಾದವರು, ಜಿತೇಂದ್ರಿಯರೂ ಗಂಭೀರ ಸ್ವಭಾವದವರೂ ವಿವೇಕವುಳ್ಳವರೂ ಆಗಿರಬೇಕೆಂದು ತಿಳಿಸು. ಅವರು ತಮ್ಮ ನಂಬಿಕೆಯಲ್ಲಿ, ಪ್ರೀತಿಯಲ್ಲಿ ಮತ್ತು ತಾಳ್ಮೆಯಲ್ಲಿ ಬಲವಾಗಿರಬೇಕೆಂದು ತಿಳಿಸು.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.


ಜನರು ಮದುವೆಮಾಡಿಕೊಳ್ಳಬಾರದೆಂದೂ ಕೆಲವು ಆಹಾರಪದಾರ್ಥಗಳನ್ನು ತಿನ್ನಬಾರದೆಂದೂ ಅವರು ಹೇಳುತ್ತಾರೆ. ಆದರೆ ನಂಬಿಕೆಯುಳ್ಳವರು ಮತ್ತು ಸತ್ಯವನ್ನು ತಿಳಿದಿರುವವರು ಕೃತಜ್ಞತಾಸ್ತುತಿ ಮಾಡಿ ಆ ಆಹಾರಪದಾರ್ಥಗಳನ್ನು ತಿನ್ನಲಿ. ಏಕೆಂದರೆ ಅವುಗಳನ್ನು ನಿರ್ಮಿಸಿದಾತನು ದೇವರೇ.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.


ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;


ಸಭಾಸೇವಕರು ಏಕ ಪತ್ನಿ ಉಳ್ಳವರಾಗಿರಬೇಕು. ಅವರು ತಮ್ಮ ಮಕ್ಕಳಿಗೆ ಮತ್ತು ಕುಟುಂಬಕ್ಕೆ ಒಳ್ಳೆಯ ನಾಯಕರಾಗಿರಬೇಕು.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು