1 ತಿಮೊಥೆಯನಿಗೆ 3:3 - ಪರಿಶುದ್ದ ಬೈಬಲ್3 ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಫಿದೊಡೊ ನಾಹೊಲ್ಯಾರ್ ಝಗ್ಡೆ-ಬಿಗ್ಡೆ ಉಟ್ವುತಲೊ ಮಾನುಸ್ ರ್‍ಹಾವ್ಚೆ ನ್ಹಯ್, ಥಂಡ್ ಮನಾಚೊ ಅನಿ ಸಮಾದಾನ್ ಮಾನುಸ್ ರ್‍ಹಾವ್ಚೊ; ತೆನಿ ಪೈಸ್ಯಾಂಚಿ ಆಶಾ ಕರುಚೆ ನ್ಹಯ್; ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.