1 ತಿಮೊಥೆಯನಿಗೆ 4:10 - ಪರಿಶುದ್ದ ಬೈಬಲ್10 ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಕ್ಕಾಗಿ ನಾವು ಕಷ್ಟಪಡುತ್ತೇವೆ, ಹೋರಾಡುತ್ತೇವೆ, ಯಾಕಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ಅಮಿ ತೆಚ್ಯಾಸಾಟ್ನಿ ಲೈ ಕಸ್ಟ್ ಕಾಡ್ಲಾಂವ್ ಅನಿ ಲೈ ರಾಬ್ಲಾಂವ್. ಕಶ್ಯಾಕ್ ಮಟ್ಲ್ಯಾರ್ ಅಮ್ಚೊ ಬರೊಸೊ ಅಮಿ ಝಿತ್ತ್ಯಾ ದೆವಾ ವರ್‍ತಿ ಥವಲ್ಲಾಂವ್. ತೊ ಸಗ್ಳ್ಯಾಕ್ನಿ ಸುಟ್ಕಾ ದಿತಲೊ ಅನಿ ಲೈ ಕರುನ್ ಜೆ ಕೊನ್ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಾತ್ ತೆಂಕಾ ಉದ್ದಾರ್ ಕರ್‍ತಾ. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.