1 ತಿಮೊಥೆಯನಿಗೆ 4:12 - ಪರಿಶುದ್ದ ಬೈಬಲ್12 ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತಿಯಾ ಎಕ್ ದಾಂಡ್ಗೊ ಮನುನ್ ಲೊಕಾನಿ ತುಕಾ ಬಾರಿಕ್ ಮನುನ್ ಯವ್ಜಿಸರ್ಕೆ ರ್‍ಹಾವ್‍ನಕೊ, ತುಜ್ಯಾ ಬೊಲ್ನ್ಯಾತ್, ಚಾಲಿತ್ ಪ್ರೆಮಾತ್ ಅನಿ ವಿಶ್ವಾಸಾತ್ ಸಗ್ಳ್ಯಾಕ್ನಿ ಪವಿತ್ರ್ ಜಿವನಾತ್ ತಿಯಾ ಉದಾರನ್ ಹೊವ್ನ್ ರ್‍ಹಾ. ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.