Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:16 - ಪರಿಶುದ್ದ ಬೈಬಲ್‌

16 ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಜ್ಯಾ ಜಿವನಾರ್ ಅನಿ ತುಜ್ಯಾ ಶಿಕಾಪಾನ್ನಿ ವಿಶೆಸ್ ಧ್ಯಾನ್ ದಿ ತಿಯಾ ಅಶೆ ಕರುನ್‍ ಗೆತುಚ್ ರ್‍ಹಾ ಕಶ್ಯಾಕ್ ಮಟ್ಲ್ಯಾರ್, ತಿಯಾ ಅಶೆ ಕರುನ್ಗೆತ್ ರ್‍ಹಾತಲೆ ಹೊಲ್ಯಾರ್ ಹೆಚ್ಯಾ ವೈನಾ ತಿಯಾ ಅಪ್ನಾಕುಚ್ ಅನಿ ಹಿ ವಿಶಯಾ ಸಾಂಗ್ತಲ್ಯಾಂಚಿ ಬಿ ರಾಕ್ವನ್ ಕರ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:16
38 ತಿಳಿವುಗಳ ಹೋಲಿಕೆ  

ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.


ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.


ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.”


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


ಆದರೆ ನೀನು ಕಲಿತಿರುವ ಉಪದೇಶಗಳನ್ನು ಅನುಸರಿಸು. ಅವು ಸತ್ಯವೆಂಬುದು ನಿನಗೆ ತಿಳಿದಿದೆ. ಅವುಗಳನ್ನು ನಿನಗೆ ಕಲಿಸಿದ ಜನರು ನಂಬಿಕೆಗೆ ಯೋಗ್ಯರೆಂಬುದು ನಿನಗೆ ತಿಳಿದಿದೆ.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.


ನಾನು ಮಕೆದೋನಿಯಕ್ಕೆ ಹೋಗುವಾಗ, ನೀನು ಎಫೆಸದಲ್ಲೇ ಇರು ಎಂದು ನಿನಗೆ ತಿಳಿಸಿದ್ದೆ. ಏಕೆಂದರೆ ಕೆಲವರು ಅಲ್ಲಿ ಸುಳ್ಳು ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ನೀನು ಅದನ್ನು ನಿಲ್ಲಿಸಬೇಕು.


ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.


“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.


ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.”


ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.


ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.


ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.


ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.


ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.


ಅವನು ಅವರಿಗೆ, “ನೀವು ಮಾಡುವ ಕಾರ್ಯದಲ್ಲಿ ಜಾಗರೂಕರಾಗಿರಿ. ನೀವು ಯೆಹೋವನ ಪರವಾಗಿ ಜನರ ನ್ಯಾಯವನ್ನು ತೀರಿಸುವವರಾಗಿದ್ದೀರಿ. ನೀವು ನ್ಯಾಯತೀರಿಸುವಾಗ ಯೆಹೋವನು ನಿಮ್ಮ ಸಂಗಡ ಇರುವನು.


ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು