Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:7 - ಪರಿಶುದ್ದ ಬೈಬಲ್‌

7 ದೇವರ ಸತ್ಯಕ್ಕೆ ಹೊಂದಿಕೆಯಾಗದ ಕ್ಷುಲ್ಲಕ ಕಥೆಗಳನ್ನು ಜನರು ಹೇಳುತ್ತಾರೆ. ಆ ಕಥೆಗಳ ಬೋಧನೆಯನ್ನು ಅನುಸರಿಸಬೇಡ. ದೇವರಿಗೆ ನಿಜವಾದ ಸೇವೆ ಮಾಡಲು ನಿನಗೆ ನೀನೇ ಬೋಧಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಜ್ಜೀಕಥೆಗಳಂತಿರುವ ಕೇವಲ ಪ್ರಾಪಂಚಿಕವಾದ ಕಥೆಗಳನ್ನು ತಳ್ಳಿಬಿಟ್ಟು ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಅಜ್ಜಿಯಾಂಚಿ ದೆವಸ್ಪಾನ್‍ನಸಲ್ಲ್ಯಾ ಕಲ್ಪನ್ ಕರುನ್ ಸಾಂಗ್ತಲ್ಯಾ ಕಾನಿಯಾಕ್ನಾ ಧುರ್ ರ್‍ಹಾ, ಅನಿ ದೆವಾಚಿ ಸೆವಾ ಕರುಕ್ ತಿಯಾ ಅಪ್ನಾಕುಚ್ ಶಿಕುನ್ ಘೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:7
20 ತಿಳಿವುಗಳ ಹೋಲಿಕೆ  

ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.


ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ.


ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ.


ಬುದ್ಧಿಯಿಲ್ಲದೆ ಕುತರ್ಕ ಮಾಡುವ ಜನರಿಂದ, ನಿರರ್ಥಕವಾದ ವಂಶಾವಳಿಗಳ ಚರಿತ್ರೆಯ ಬಗ್ಗೆ ಮಾತನಾಡುವ ಜನರಿಂದ, ಮೋಶೆಯು ಬರೆದಿರುವ ಧರ್ಮಶಾಸ್ತ್ರದಲ್ಲಿರುವ ನಿಯಮಗಳ ಬಗ್ಗೆ ತೊಂದರೆಯನ್ನು ಉಂಟುಮಾಡುವ ಮತ್ತು ವಾಗ್ವಾದ ಮಾಡುವ ಜನರಿಂದ ದೂರವಾಗಿರು. ಅವುಗಳಿಗೆ ಯಾವ ಬೆಲೆಯೂ ಇಲ್ಲ, ಅವುಗಳಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ.


ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.


ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.


ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ.


ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಆದರೆ ಅವರು ಯೋಗ್ಯಕಾರ್ಯಗಳನ್ನು ಮಾಡುವುದರ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು. ದೇವರನ್ನು ಆರಾಧಿಸುತ್ತೇವೆ ಎಂದು ಹೇಳುವ ಸ್ತ್ರೀಯರು ತಮ್ಮನ್ನು ಈ ರೀತಿಯಲ್ಲಿಯೇ ಅಲಂಕರಿಸಿಕೊಳ್ಳಬೇಕು.


ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ,


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು