1 ತಿಮೊಥೆಯನಿಗೆ 4:8 - ಪರಿಶುದ್ದ ಬೈಬಲ್8 ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅಂಗಾಚಿ ಕಸರತ್ ಉಲ್ಲಿ ಫಾಯ್ದ್ಯಾಕ್ ಪಡ್ತಾ, ತೆ ಖರೆ ಹಾಯ್, ಖರೆ ಆತ್ಮಿಕ್ ರಿತಿಚಿ ಕಸ್‍ರತ್ ಸಗ್ಳ್ಯಾ ರಿತಿನ್ ಲೈ ಕಿಮ್ತಿಚಿ, ತಿ ಅತ್ತಾಚ್ಯಾ ಅನಿ ಫಿಡ್ಲ್ಯಾ ದೊನಿಬಿ ಜಿವನಾಚ್ಯಾ ಗೊಸ್ಟಿಯಾ ಮಿಳ್ವುತಾ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.