1 ತಿಮೊಥೆಯನಿಗೆ 5:13 - ಪರಿಶುದ್ದ ಬೈಬಲ್13 ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದಲ್ಲದೆ ಹರಟೆಮಾತಾಡುವವರೂ ಇತರರ ಕೆಲಸದಲ್ಲಿ ಕೈಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆನಿ ಎಕ್ ಘರಾತ್ನಾ ಅನಿಎಕ್ ಘರಾಕ್ನಿ ಫಿರುನ್ಗೆತ್ ಅಪ್ನಾಚೊ ಎಳ್ ಹಾಳ್ ಕರುಕ್ ಶಿಕ್ತಾತ್; ಅನಿ ನಕ್ಕೊ ಹೊಲ್ಲ್ಯಾ ಗೊಸ್ಟಿಯಾ ಬೊಲುನ್ಗೆತ್ ಅನಿ ನಕ್ಕೊ ಹೊಲ್ಲ್ಯಾ ವಿಶಯಾತ್ನಿ ಟಕ್ಲೆ ಘಾಲುನ್ಗೆತ್ ನಕ್ಕೊ ಹೊಲ್ಲಿ ಕಾಮಾ ಕರಿತ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |
ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.