1 ತಿಮೊಥೆಯನಿಗೆ 5:17 - ಪರಿಶುದ್ದ ಬೈಬಲ್17 ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮುಖಂಡಾ ಹೊವ್ನ್ ಬರಿ ಕಾಮಾ ಕರ್‍ತಲ್ಯಾ ಜಾನ್ತ್ಯಾ ಲೊಕಾಂಚಿ ಮಜುರಿ ದೊನ್‍ಪಟ್ ಹೊವ್ಚಿ, ಲೈ ಕರುನ್ ತೆಂಚಿ, ಜೆ ಕೊನ್ ಪ್ರಚಾರ್ ಕರ್‍ತಲ್ಯಾತ್ ಅನಿ ಶಿಕ್ವುತಲ್ಯಾತ್ ಘಟ್‍ಮುಟ್ ರಿತಿನ್ ಕಾಮ್ ಕರ್ತಾತ್. ಅಧ್ಯಾಯವನ್ನು ನೋಡಿ |
ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”