1 ತಿಮೊಥೆಯನಿಗೆ 5:20 - ಪರಿಶುದ್ದ ಬೈಬಲ್20 ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆ ಕೊನ್ ಪಾಪ್ ಕರ್‍ತಾತ್ ತೆಂಕಾ ಲೊಕಾತ್ನಿಚ್ ಜೊರ್ ಕರ್, ಅಶೆ ಅನಿ ಹುರಲ್ಲ್ಯಾ ಲೊಕಾಕ್ನಿಬಿ ಉಲ್ಲೆ ಭಿಂಯೆ ರ್‍ಹಾತಾ. ಅಧ್ಯಾಯವನ್ನು ನೋಡಿ |
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.