1 ತಿಮೊಥೆಯನಿಗೆ 5:8 - ಪರಿಶುದ್ದ ಬೈಬಲ್8 ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ಜರ್ ಕೊನ್ ಅಪ್ನಾಚ್ಯಾ ಸೊಯ್ರ್ಯಾಂಚಿ ಕಾಳಜಿ ಘೆಯ್ನ್ಯಾಸಿ ಅನಿ ಲೈ ಕರುನ್ ಅಪ್ನಾಚ್ಯಾ ಘರಾತ್ಲ್ಯಾ ಲೊಕಾಂಚಿ ತರ್ ತೆನಿ ವಿಶ್ವಾಸ್ ಸೊಡ್ಲ್ಯಾನಾತ್ ಅನಿ ದೆವಾಕ್ ವಿಶ್ವಾಸ್ ಕರಿನಸಲ್ಲ್ಯಾಂಚ್ಯಾನ್ಕಿ ಬುರ್ಶಿ ತೆಂಚಿ ಪರಿಸ್ತಿತಿ. ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.