Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:1 - ಪರಿಶುದ್ದ ಬೈಬಲ್‌

1 ಗುಲಾಮರು ತಮ್ಮ ಯಜಮಾನರಿಗೆ ಸಂಪೂರ್ಣ ಗೌರವ ಕೊಡಬೇಕು. ಆಗ ದೇವರ ಹೆಸರಾಗಲಿ ನಮ್ಮ ಉಪದೇಶವಾಗಲಿ ಟೀಕೆಗೆ ಗುರಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾಸರಾಗಿ ಮತ್ತೊಬ್ಬರ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ಮಾನಕ್ಕೂ ಯೋಗ್ಯರೆಂದೆಣಿಸಲಿ; ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದೆ ಉಂಟಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆ ಕೊನ್ ಆಳಾ ಹೊವ್ನ್ ಹಾತ್, ತೆನಿ ಅಪ್ನಾಚ್ಯಾ ಸಾವ್ಕಾರಾಕ್ ಸಗ್ಳ್ಯಾ ರಿತಿನ್ ಮಾನ್ ದಿಂವ್ದಿತ್, ಅಶೆ, ದೆವಾಚ್ಯಾ ಅನಿ ಅಮ್ಚ್ಯಾ ಶಿಕಾಪಾಚ್ಯಾ ವಿಶಯಾತ್ ಕೊನ್‍ಬಿ ವಾಯ್ಟ್ ಬೊಲಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:1
35 ತಿಳಿವುಗಳ ಹೋಲಿಕೆ  

ಜ್ಞಾನವುಳ್ಳವರಾಗಿರಿ, ಪರಿಶುದ್ಧರಾಗಿರಿ, ನಿಮ್ಮ ಮನೆಕೆಲಸವನ್ನು ನೋಡಿಕೊಳ್ಳಿರಿ, ದಯೆಯುಳ್ಳವರಾಗಿರಿ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ” ಎಂದು ಉಪದೇಶಿಸಬೇಕು. ಆಗ ದೇವರು ನಮಗೆ ದಯಪಾಲಿಸಿದ ಬೋಧನೆಯನ್ನು ಟೀಕಿಸಲು ಯಾರಿಗೂ ಸಾಧ್ಯವಾಗುವುದಿಲ್ಲ.


“ಯೆಹೂದ್ಯರಾದ ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದ ಜನರು ದೇವರ ಹೆಸರಿಗೆ ವಿರೋಧವಾಗಿ ಮಾತಾಡುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.


ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಈ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ!


ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.


ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!


ಹೌದು, ನಿಮಗೆ ನನ್ನ ನೊಗವು ಮೃದುವಾಗಿದೆ; ನನ್ನ ಹೊರೆಯು ಹಗುರವಾಗಿದೆ.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.


ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.


ಹಾಗಾದರೆ, ಏನನ್ನು ನೋಡಲು ಹೋಗಿದ್ದಿರಿ? ಒಬ್ಬ ಪ್ರವಾದಿಯನ್ನೋ? ಹೌದು! ಯೋಹಾನನು ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.


ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ಆ ದೇಶಗಳಲ್ಲಿರುವಾಗಲೂ ಅವರು ನನ್ನ ಹೆಸರಿಗೆ ಅಪಕೀರ್ತಿ ತಂದರು. ಹೇಗೆ? ‘ಇವರು ಯೆಹೋವನ ಜನರು. ಆತನು ಕೊಟ್ಟ ದೇಶವನ್ನು ಇವರು ತೊರೆದರು.’ ಎಂದು ಆ ದೇಶದ ಜನರು ಅನ್ನುವಂತೆ ಮಾಡಿದರು.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.”


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.


ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.


ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.


ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.


ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.


ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು