Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:13 - ಪರಿಶುದ್ದ ಬೈಬಲ್‌

13 ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾಚ್ಯಾ ಇದ್ರಾಕ್ ತೊ ಸಗ್ಳ್ಯಾಕಿ ಜಿವ್ ದಿತಾ ಅನಿ ಕ್ರಿಸ್ತ್ ಜೆಜುನ್ ಪೊಂತ್ ಪಿಲಾತಾಕ್ ಬರಿ ಸಾಕ್ಷಿ ದಿಲ್ಯಾನ್. ಮಿಯಾ ತುಕಾ ಹುಕುಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:13
22 ತಿಳಿವುಗಳ ಹೋಲಿಕೆ  

ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.


ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ಆ ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,


ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು.


ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.


ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.


ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು