Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:14 - ಪರಿಶುದ್ದ ಬೈಬಲ್‌

14 ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ನೀನು ಸುವಾರ್ತೆಯ ವಿಧಿಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಕಾ ದಿಲ್ಲಿ ಹುಕುಮಾ ಅಮ್ಚೊ ಧನಿ ಜೆಜು ಕ್ರಿಸ್ತ್ ದಿಸ್ತಲ್ಲ್ಯಾ ದಿಸಾ ಪತರ್ ವಿಶ್ವಾಸಾನ್ ಪಾಳ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:14
28 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.


ಈಗಲಾದರೋ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ಒಳಿತುಕೆಡಕುಗಳಿಗಿರುವ ವ್ಯತ್ಯಾಸವನ್ನು ಅರಿತುಕೊಂಡು ಒಳ್ಳೆಯದನ್ನೇ ಆರಿಸಿಕೊಳ್ಳುವಂಥವರಾಗಬೇಕು; ಕ್ರಿಸ್ತನ ಬರುವಿಕೆಯಲ್ಲಿ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕು.


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ನನ್ನ ಪ್ರಿಯೆ, ನೀನು ಸರ್ವಾಂಗಸುಂದರಿ. ನಿನಗೆ ಎಲ್ಲಿಯೂ ಕಲೆಗಳಿಲ್ಲ!


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ.


ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.


ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.


ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.


ಹೌದು, ಆ ಜನರು ಸರಿಯಾದ ಮಾರ್ಗವನ್ನು ತಿಳಿಯದೆ ಹೋಗಿದ್ದರೇ ಒಳ್ಳೆಯದಾಗುತ್ತಿತ್ತು. ಸರಿಯಾದ ಮಾರ್ಗವನ್ನು ಅರಿತುಕೊಂಡು, ಪವಿತ್ರ ಬೋಧನೆಗಳಿಗೆ ವಿಮುಖರಾಗುವುದಕ್ಕಿಂತ ಅದನ್ನು ತಿಳಿದುಕೊಳ್ಳದಿದ್ದರೇ ಚೆನ್ನಾಗಿರುತ್ತಿತ್ತು.


ಪರಿಶುದ್ಧರಾದ ಪ್ರವಾದಿಗಳು ಹಿಂದಿನಕಾಲದಲ್ಲಿ ಹೇಳಿದ್ದನ್ನು ನೀವು ಜ್ಞಾಪಿಸಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ. ನಮ್ಮ ರಕ್ಷಕನಾದ ಪ್ರಭುವು ನಿಮ್ಮ ಅಪೊಸ್ತಲರ ಮೂಲಕ ನೀಡಿದ ಆಜ್ಞೆಯನ್ನು ನೆನಪು ಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು