1 ಥೆಸಲೋನಿಕದವರಿಗೆ 1:9 - ಪರಿಶುದ್ದ ಬೈಬಲ್9 ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತಿ ಸಗ್ಳಿ ಲೊಕಾ, ಅಮಿ ತುಮ್ಚೆಕ್ಡೆ ಯೆಲ್ಲ್ಯಾ ತನ್ನಾ ತುಮಿ ಕಶೆ ಅಮ್ಕಾ ಸ್ವಿಕಾರ್ ಕರ್ಲ್ಯಾಸಿ, ಅನಿ ಮುರ್ತಿಚ್ಯಾ ಪುಜ್ಯಾತ್ನಾ ಖರ್‍ಯಾ ಝಿತ್ತ್ಯಾ ದೆವಾಚಿ ಸೆವಾ ಕರುಕ್ ದೆವಾಕ್ಡೆ ಕಶೆ ಪರತ್ಲ್ಯಾಶಿ ಮನುನ್ ಅಪ್ನಿಚ್ ಸಾಂಗುಕ್ ಲಾಗಲ್ಲಿ ಹಾತ್. ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.