Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:10 - ಪರಿಶುದ್ದ ಬೈಬಲ್‌

10 ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆಂಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮಿ ದೆವಾಕ್ ವಿಶ್ವಾಸ್ ಕರಲ್ಲ್ಯಾ ಮಾನಾ ತುಮ್ಚ್ಯಾ ವಾಂಗ್ಡಾ ಅಮಿ ರ್‍ಹಾತಲಿ ಚಾಲ್ ಕವ್ಡಿ ಪವಿತ್ರ್, ನಿಯತ್ತಿಚಿ ಅನಿ ಸಾಪ್‍ಮನಾಚಿ ಹೊವ್ನ್ ಹೊತ್ತಿ ಮನ್ತಲ್ಯಾಕ್ ತುಮಿಚ್ ಸಾಕ್ಷಿ, ಅನಿ ದೆವ್‍ಬಿ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:10
26 ತಿಳಿವುಗಳ ಹೋಲಿಕೆ  

ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.


ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ.


ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ.


ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.


ನಾವು ಜೀವಿಸುವಂತೆಯೇ ನೀವೂ ಜೀವಿಸಬೇಕೆಂದು ನಿಮಗೆ ಗೊತ್ತಿದೆ. ನಾವು ನಿಮ್ಮ ಜೊತೆಯಲ್ಲಿದ್ದಾಗ ಸೋಮಾರಿಗಳಾಗಿರಲಿಲ್ಲ;


ನಿಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ ನಿಮ್ಮನ್ನು ಮರುಳು ಮಾಡಬೇಕೆಂದು ನಾವೆಂದೂ ಪ್ರಯತ್ನಿಸಿಲ್ಲವೆಂಬುದು ನಿಮಗೆ ತಿಳಿದಿದೆ. ನಾವು ನಿಮ್ಮ ಹಣವನ್ನು ಕಸಿದುಕೊಳ್ಳಲು ಪ್ರಯತ್ನಿಸಿಲ್ಲ; ನಮ್ಮ ಸ್ವಾರ್ಥವನ್ನು ಮರೆಮಾಡಿಕೊಂಡು ವೇಶಧಾರಿಗಳಾಗಿರಲಿಲ್ಲ. ಇದು ನಿಜವೆಂಬುದು ದೇವರಿಗೆ ತಿಳಿದಿದೆ.


ನಾನು ನಿಮಗೆ ಭಾರವಾಗದಿರುವುದು ನಿಮ್ಮ ಮೇಲೆ ನನಗೆ ಪ್ರೀತಿಯಿಲ್ಲದಿರುವ ಕಾರಣದಿಂದಲೋ? ಇಲ್ಲ! ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತಿದೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವನ್ನು ಕೊಡಿರಿ. ನಾವು ನಿಮ್ಮಲ್ಲಿ ಯಾರಿಗೂ ಕೆಟ್ಟದ್ದನ್ನು ಮಾಡಿಲ್ಲ. ಯಾರ ನಂಬಿಕೆಯನ್ನೂ ಹಾಳುಮಾಡಿಲ್ಲ; ಯಾರನ್ನೂ ವಂಚಿಸಲಿಲ್ಲ.


ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ.


ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.


ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.


ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.


ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು