Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:2 - ಪರಿಶುದ್ದ ಬೈಬಲ್‌

2 ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಮಿ ತುಮ್ಚೆಕ್ಡೆ ಥೆಸ್ಸಾಲೊನಿಕಾಕ್ ಯೆವ್ಚ್ಯಾ ಅದ್ದಿ ಫಿಲಿಪ್ಪಿ ಮನ್ತಲ್ಯಾ ಶಾರಾತ್ ಅಮ್ಕಾ ಕಶೆ ಚಾಲ್ವುಲ್ಯಾನಿ ಅನಿ ಕಸೆ ಅಮ್ಚಿ ಮರ್ಯಾದ್ ಕಾಡ್ಲ್ಯಾನಿ ಮನ್ತಲೆ ತುಮ್ಕಾ ಗೊತ್ತ್ ಹಾಯ್, ಥೈ ಲೈ ವಿರೊದ್ ರ್‍ಹಾಲ್ಯಾರ್‍ಬಿ ಅಪ್ನಾಚಿ ಬರಿ ಖಬರ್ ತುಮ್ಕಾ ಸಾಂಗುಕ್ ಮನುನ್ ದೆವಾನುಚ್ ಅಮ್ಕಾ ಧೈರೊ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:2
27 ತಿಳಿವುಗಳ ಹೋಲಿಕೆ  

ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಆದರೆ ಪೌಲನು, “ನಾವು ಏನು ತಪ್ಪು ಮಾಡಿದ್ದೇವೆಂಬುದನ್ನು ನಿಮ್ಮ ನಾಯಕರು ನಿರೂಪಿಸದೆ ನಮ್ಮನ್ನು ಜನರ ಎದುರಿನಲ್ಲಿ ಹೊಡೆಸಿ ಸೆರೆಮನೆಗೆ ಹಾಕಿಸಿದರು. ನಾವು ರೋಮಿನ ಪ್ರಜೆಗಳು. ಆದ್ದರಿಂದ ನಮಗೂ ಹಕ್ಕುಗಳಿವೆ. ಈಗ ಅವರು ನಮ್ಮನ್ನು ಗೋಪ್ಯವಾಗಿ ಬಿಡುಗಡೆ ಮಾಡಬೇಕೆಂದಿರುವರೇ? ಇಲ್ಲ! ನಾಯಕರೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಬೇಕು!” ಎಂದು ಹೇಳಿದನು.


ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.


ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.


ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು.


ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.


ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು.


ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.


ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.


ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಆ ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ನಮಗೆ ಈ ನಿರೀಕ್ಷೆ ಇರುವುದರಿಂದ ನಾವು ಬಹಳ ಧೈರ್ಯವಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು