Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:9 - ಪರಿಶುದ್ದ ಬೈಬಲ್‌

9 ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಹೋದರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ತುಮ್ಚ್ಯಾ ಮದ್ದಿ ಕಶೆ ಕಾಯ್-ಕಾಯ್ ಕರ್ಲಾಂವ್ ಅನಿ ಕವ್ಡೆ ರಾಬ್ಲಾಂವ್ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್. ದೆವಾಕ್ನಾ ಯೆಲ್ಲಿ ಬರಿ ಖಬರ್ ಅಮಿ ತುಮ್ಕಾ ದಿಲ್ಲ್ಯಾ ಬಾಸೆನ್, ತುಮ್ಕಾ ಅಮ್ಚ್ಯಾ ವೈನಾ ಕಾಯ್ಬಿ ಸಮಸ್ಯೆ ಹೊವ್ಚೆ ನ್ಹಯ್ ಮನ್ತಲ್ಯಾ ಸಾಟ್ನಿ ಅಮಿ ರಾತ್-ದಿಸ್ ಬರಿ ಖಬರ್ ಸಾಂಗಟ್ಲಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:9
35 ತಿಳಿವುಗಳ ಹೋಲಿಕೆ  

ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.


ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.


ಒಬ್ಬ ವಿಧವೆಯು ನಿಜವಾಗಿಯೂ ಸಹಾಯಕರಿಲ್ಲದೆ ಒಬ್ಬಂಟಿಗಳಾಗಿದ್ದರೆ, ಆಗ ಆಕೆಯು ತನ್ನ ರಕ್ಷಣೆಗಾಗಿ ದೇವರ ಮೇಲೆ ಭರವಸೆ ಇಡುವಳು. ಆ ಸ್ತ್ರೀಯು ಹಗಲು ರಾತ್ರಿಯೆಲ್ಲ ಪ್ರಾರ್ಥಿಸುವಳು. ಅವಳು ದೇವರ ಸಹಾಯವನ್ನು ಬೇಡುವಳು.


ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ಜನರಿಂದ ಬರುವ ಮಾನಮರ್ಯಾದೆಗಳನ್ನು ನಿಮ್ಮಿಂದಾಗಲಿ ಇತರ ಜನರಿಂದಾಗಲಿ ನಾವೆಂದೂ ಬಯಸಲಿಲ್ಲ.


ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.


ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.


ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.


ಪ್ರತಿದಿನ ನಮ್ಮ ಊಟಕ್ಕಾಗಿ ಒಂದು ಹೋರಿಯನ್ನು, ಆರು ಕೊಬ್ಬಿದ ಕುರಿಗಳನ್ನು ಮತ್ತು ಅನೇಕ ಕೋಳಿಗಳನ್ನು ಕೊಯ್ಯಲಾಗುತ್ತಿತ್ತು; ಹತ್ತುದಿನಕ್ಕೊಮ್ಮೆ ವಿವಿಧ ರೀತಿಯ ದ್ರಾಕ್ಷಾರಸವನ್ನು ಒದಗಿಸಿಕೊಡುತ್ತಿದ್ದೆನು. ಆದರೂ ರಾಜ್ಯಪಾಲನಿಗೆ ಸಲ್ಲಬೇಕಾಗಿದ್ದ ಆಹಾರಪದಾರ್ಥಗಳನ್ನು ನಾನೆಂದೂ ಕೇಳಲಿಲ್ಲ; ಅದಕ್ಕಾಗಿ ಜನರಿಂದ ತೆರಿಗೆ ತೆಗೆದುಕೊಳ್ಳಲಿಲ್ಲ. ಯಾಕೆಂದರೆ ನನ್ನ ಜನರು ಮಾಡುವ ಕೆಲಸವು ತುಂಬಾ ಪ್ರಯಾಸಕರವಾದದ್ದೆಂದು ನನಗೆ ಗೊತ್ತಿತ್ತು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು.


ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ನಂಬಿಕೆಯಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.


ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ನಾನು ಥೆಸಲೋನಿಕದಲ್ಲಿದ್ದಾಗ ನನಗೆ ಅಗತ್ಯವಾದವುಗಳನ್ನು ನೀವು ಹಲವಾರು ಸಲ ಕಳುಹಿಸಿಕೊಟ್ಟಿರಿ.


ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.


ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಯೆಹೋವ ದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಊಟಮಾಡುವುದಕ್ಕೆ ಮತ್ತು ಪಾನೀಯಗಳನ್ನು ಕುಡಿಯುವುದಕ್ಕೆ ನಮಗೆ ಹಕ್ಕಿಲ್ಲವೇ?


ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.


ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು.


ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು