Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:11 - ಪರಿಶುದ್ದ ಬೈಬಲ್‌

11 ನಾವು ನಿಮ್ಮ ಬಳಿಗೆ ಬರಲು ಮಾರ್ಗವನ್ನು ಸರಾಗಗೊಳಿಸುವಂತೆ ನಮ್ಮ ತಂದೆಯಾದ ದೇವರಿಗೂ ಪ್ರಭುವಾದ ಯೇಸುವಿಗೂ ಪ್ರಾರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸುವೂ ನಮಗೆ ನಿಮ್ಮ ಬಳಿಗೆ ಬರುವದಕ್ಕೆ ಮಾರ್ಗವನ್ನು ಸರಾಗಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ತಂದೆಯಾದ ದೇವರೂ ನಮಗೆ ಕರ್ತ ಆಗಿರುವ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ಮಾರ್ಗವನ್ನು ಸುಗಮಗೊಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವಾನ್ ಅಮ್ಚ್ಯಾ ಬಾಬಾನ್ ಅನಿ ಧನಿಯಾ ಜೆಜುನ್, ಅಮ್ಕಾ ತುಮ್ಚೆಕ್ಡೆ ಯೆವ್ನ್ ಪಾವಿ ಸಾರ್ಕಿ ವಾಟ್ ಕರುನ್ ದಿಲ್ಯಾರ್ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:11
28 ತಿಳಿವುಗಳ ಹೋಲಿಕೆ  

ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.


ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.


ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ.


“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ, ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು.


ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ.


ಹೌದು, ಬೇರೆಯವರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸುತ್ತಾನೆ.


ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.


ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿ ನಂಬಿಗಸ್ತರಾದ ಮತ್ತು ಪವಿತ್ರರಾದ ಸಹೋದರ, ಸಹೋದರಿಯರಿಗೆ ನಾನು ಈ ಪತ್ರವನ್ನು ನಮ್ಮ ಸಹೋದರನಾದ ತಿಮೊಥೆಯನ ಜೊತೆಗೂಡಿ ಬರೆಯುತ್ತಿದ್ದೇನೆ. ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರಕಲಿ.


“ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.”


ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು.


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.


ಪ್ರಭುವು ತಾನೇ ಪರಲೋಕದಿಂದ ಇಳಿದುಬರುವನು. ಆಗ ಪ್ರಧಾನ ದೇವದೂತನು ದೇವರ ತುತೂರಿ ಧ್ವನಿಯೊಡನೆ ಆಜ್ಞಾಘೋಷ ಮಾಡುವನು. ಕೂಡಲೇ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದುಬರುವರು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಸಂಪೂರ್ಣವಾಗಿ ಪರಿಶುದ್ಧಗೊಳಿಸಲೆಂದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆಂದು ಪ್ರಾರ್ಥಿಸುತ್ತೇವೆ.


ಶಾಂತಿದಾಯಕನಾದ ಪ್ರಭುವು ಎಲ್ಲಾ ಕಾಲಗಳಲ್ಲಿಯೂ ಮತ್ತು ಎಲ್ಲಾ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭುವು ನಿಮ್ಮೆಲ್ಲರೊಂದಿಗಿರಲಿ.


ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು