Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:3 - ಪರಿಶುದ್ದ ಬೈಬಲ್‌

3 ನಮಗೀಗ ಬಂದಿರುವ ಕಷ್ಟಗಳಿಂದ ನಿಮ್ಮಲ್ಲಿ ಯಾರೂ ತಳಮಳಗೊಳ್ಳಬಾರದೆಂದು ತಿಮೊಥೆಯನನ್ನು ಕಳುಹಿಸಿದ್ದೇವೆ. ನಮಗೆ ಇಂಥಾ ಕಷ್ಟಗಳು ಬರಲೇಬೇಕೆಂದು ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಸ್ಟಾತ್ನಿ ಅನಿ ತರಾಸಾನಿ ಕೊನ್‍ಬಿ, ಭಿಂವ್ನ್ ದೆವಾ ವೈಲೊ ವಿಶ್ವಾಸ್ ಸೊಡ್ತಲೆ ನಕ್ಕೊ ಮನುನ್ ಅಮಿ ಅಶೆ ಕರ್ಲಾಂವ್. ಅಮಿ ಕಸ್ಟ್ ಸೊಸ್ತಲೆ ದೆವಾಚ್ಯಾ ಮರ್ಜಿ ಪರ್ಕಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:3
29 ತಿಳಿವುಗಳ ಹೋಲಿಕೆ  

ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ದೇವರು ನಮ್ಮನ್ನು ಆರಿಸಿಕೊಂಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎಂದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆಂದೇ ದೇವರು ನಮ್ಮನ್ನು ಆರಿಸಿಕೊಂಡನು.


ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ.


ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ಯೇಸುವಿನ ಬಗ್ಗೆ ದಾವೀದನು ಹೀಗೆ ಹೇಳಿದ್ದಾನೆ: ‘ಪ್ರಭುವು ಯಾವಾಗಲೂ ನನ್ನ ಮುಂದೆ ಇರುವುದನ್ನು ನಾನು ನೋಡುತ್ತಿದ್ದೆನು; ನನ್ನನ್ನು ಸುರಕ್ಷಿತವಾಗಿಡಲು ಆತನು ನನ್ನ ಬಲಗಡೆಯಲ್ಲಿದ್ದಾನೆ.


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


“ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.


ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.


ದೇವರು ತನ್ನ ಆಲೋಚನೆಗೆ ತಕ್ಕಂತೆ ನನಗೆ ಮಾಡುವನು. ಆತನಲ್ಲಿ ಇಂಥಾ ಸಂಕಲ್ಪಗಳು ಎಷ್ಟೋ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು