1 ಥೆಸಲೋನಿಕದವರಿಗೆ 3:9 - ಪರಿಶುದ್ದ ಬೈಬಲ್9 ನಿಮ್ಮ ನಿಮಿತ್ತದಿಂದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನಂದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿಮ್ಮ ನಿವಿುತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಕ್ಕಾಗಿ ದೇವರಿಗೆ ತಕ್ಕಷ್ಟು ಸ್ತೋತ್ರಮಾಡುವದು ನಮ್ಮಿಂದ ಹೇಗಾದೀತು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಆನಂದಕ್ಕೆ ಬದಲಾಗಿ ದೇವರಿಗೆ ಹೇಗೆ ಸಾಕಷ್ಟು ಕೃತಜ್ಞತೆಯನ್ನು ಸಲ್ಲಿಸಬಹುದು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅತ್ತಾ ತುಮ್ಕಾ ಲಾಗುನ್ ದೆವಾಚ್ಯಾ ಇದ್ರಾಕ್ ಅಮ್ಕಾ ಕವ್ಡಿಕಿ ಕುಶಿ ಹೊವ್ಕ್ ಲಾಗ್ಲಾ, ಹೆಚ್ಯಾಸಾಟ್ನಿ ಅಮಿ ದೆವಾಕ್ ಕವ್ಡ್ಯಾ ಮಾಪಾನ್ ಧನ್ಯವಾದ್ ದಿಲ್ಯಾರ್‍ಬಿ ಕಮಿಚ್. ಅಧ್ಯಾಯವನ್ನು ನೋಡಿ |
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.