1 ಥೆಸಲೋನಿಕದವರಿಗೆ 4:15 - ಪರಿಶುದ್ದ ಬೈಬಲ್15 ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ ಕರ್ತನು ಪ್ರತ್ಯಕ್ಷನಾಗುವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜೆ ಕಾಯ್ ಅಮಿ ತುಮ್ಕಾ ಶಿಕ್ವುಲಾಂವ್ ತೆ ಧನಿಯಾಚೆಚ್ ಶಿಕಾಪ್, ಧನಿ ಯೆತಲ್ಯಾ ದಿಸಿ ಝಿತ್ತೆ ಹೊತ್ತೆ ಅಮಿ, ಅತ್ತಾ ಮರುನ್ ಗೆಲ್ಲ್ಯಾ ಲೊಕಾಂಚ್ಯಾ ಫಿಡೆ ಜಾಯ್ನಾಂವ್. ಅಧ್ಯಾಯವನ್ನು ನೋಡಿ |
ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.