Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:14 - ಪರಿಶುದ್ದ ಬೈಬಲ್‌

14 ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಭಾವಾ-ಭೆನಿಯಾನು, ಅಮಿ ತುಮ್ಚ್ಯಾಕ್ಡೆ ಲೈ ಮಾಗ್ತಾಂವ್, ಕಾಮ್ ಕರಿನಸ್ತಾನಾ ರ್‍ಹಾತಲ್ಯಾಕ್ನಿ ಉಶಾರ್ಕಿ ಸಾಂಗಾ, ಭಿಂವ್ಕುರ್ಯ್ಯಾಕ್ನಿ ಧೈರೊ ದಿವಾ, ಬಳನಸಲ್ಯಾಕ್ನಿ ಮಜತ್ ಕರಾ, ಸಗ್ಳ್ಯಾಂಚ್ಯಾ ವಾಂಗ್ಡಾ ಸಮಾದಾನಾನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:14
40 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿಲ್ಲ. ಆದರೆ ನೀವು ನನ್ನ ಪ್ರಿಯ ಮಕ್ಕಳಾಗಿರುವುದರಿಂದ ನಿಮ್ಮನ್ನು ಎಚ್ಚರಿಸುವುದಕ್ಕಾಗಿ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.


“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.


ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ನೀವು ದುರ್ಬಲರಾಗಿದ್ದೀರಿ. ಆದ್ದರಿಂದ ನಿಮ್ಮನ್ನು ಮತ್ತೆ ಬಲಪಡಿಸಿಕೊಳ್ಳಿರಿ.


ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.


ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.


ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.


ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ.


ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.


ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.


ಆದರೆ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು