Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:3 - ಪರಿಶುದ್ದ ಬೈಬಲ್‌

3 “ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಲೊಕಾ ಸಗ್ಳೆ ಸುರಕ್ಷಿತ್ ಅನಿ ಶಾಂತ್ ಸಮಾದಾನ್ ಹಾಯ್ ಮನುನ್ ಮನ್ತಾನಾಚ್, ಎಕ್ ಗರ್‍ವಾರ್ ಬಾಯ್ಕೊಮಾನ್ಸಿಕ್ ಯೆನಾ ಯೆಲ್ಲ್ಯಾ ಸರ್ಕೆ ಅಚಾನಕ್ ನಾಸ್ ತೆಂಚೆ ವರ್‍ತಿ ಯೆತಾ, ತನ್ನಾ ತೆಂಕಾ ಕೊನಾಕ್‍ಬಿ ಹ್ಯಾ ನಾಸಾತ್ನಾ ಚುಕ್ವುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:3
48 ತಿಳಿವುಗಳ ಹೋಲಿಕೆ  

ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’”


“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”


ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.


ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ. ಭಯದಿಂದ ನಾವು ಅಸಹಾಯಕರಾಗಿದ್ದೇವೆ. ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಬಳಲುತ್ತಿದ್ದೇವೆ.


ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.


ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.


ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.


ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ.


“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.


“ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.


ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.


ಅವರ ಮೇಜಿನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ.


ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”


ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.


ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.


“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.


ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. “ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.


ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.


“ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.


“ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತುಬಿಡುತ್ತಾಳೆ.


ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಈ ಧಾಳಿಯನ್ನು ನಿರೀಕ್ಷಿಸಿರಲಿಲ್ಲ.


ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು