ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.
ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.
ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”
“ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.