Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:9 - ಪರಿಶುದ್ದ ಬೈಬಲ್‌

9 ದೇವರು ನಮ್ಮನ್ನು ಆರಿಸಿಕೊಂಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎಂದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆಂದೇ ದೇವರು ನಮ್ಮನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾನ್ ಅಮ್ಕಾ ಅಪ್ನಾಚ್ಯಾ ರಾಗಾತ್ ನಾಸ್ ಹೊವ್‍ಸಾಟ್ನಿ ಮನುನ್ ರಚುಕ್ ನಾ, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಸುಟ್ಕಾ ಗಾವುಚಿ ಮನುನ್ ತೆನಿ ರಚ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:9
23 ತಿಳಿವುಗಳ ಹೋಲಿಕೆ  

ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.


ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕರನ್ನು ನಾಶನದ ದಿನಕ್ಕಾಗಿ ಇಟ್ಟಿದ್ದಾನೆ.


ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.


ನಮಗೀಗ ಬಂದಿರುವ ಕಷ್ಟಗಳಿಂದ ನಿಮ್ಮಲ್ಲಿ ಯಾರೂ ತಳಮಳಗೊಳ್ಳಬಾರದೆಂದು ತಿಮೊಥೆಯನನ್ನು ಕಳುಹಿಸಿದ್ದೇವೆ. ನಮಗೆ ಇಂಥಾ ಕಷ್ಟಗಳು ಬರಲೇಬೇಕೆಂದು ನಿಮಗೇ ತಿಳಿದಿದೆ.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.


‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ!’ ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಎಂದು ಸಹ ಬರೆದಿದೆ.


ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು.


ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.


ದೇವರು ತನ್ನ ಆಲೋಚನೆಗೆ ತಕ್ಕಂತೆ ನನಗೆ ಮಾಡುವನು. ಆತನಲ್ಲಿ ಇಂಥಾ ಸಂಕಲ್ಪಗಳು ಎಷ್ಟೋ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು