Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:34 - ಪರಿಶುದ್ದ ಬೈಬಲ್‌

34 ಅಬ್ರಹಾಮನು ಇಸಾಕನ ತಂದೆ. ಇಸಾಕನ ಗಂಡುಮಕ್ಕಳು ಯಾರೆಂದರೆ: ಏಸಾವ ಮತ್ತು ಇಸ್ರೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸ್ರಾಯೇಲ್ ಇಸಾಕನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅಬ್ರಹಾಮನು ಇಸಾಕನನ್ನು ಪಡೆದನು; ಏಸಾವ ಇಸ್ರಾಯೇಲರು ಇಸಾಕನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:34
12 ತಿಳಿವುಗಳ ಹೋಲಿಕೆ  

ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.


ಯೂದನು ಯಾಕೋಬನ ಮಗನು. ಯಾಕೋಬನು ಇಸಾಕನ ಮಗನು. ಇಸಾಕನು ಅಬ್ರಹಾಮನ ಮಗನು. ಅಬ್ರಹಾಮನು ತೇರಹನ ಮಗನು. ತೇರಹನು ನಹೋರನ ಮಗನು.


ಅಬ್ರಹಾಮನು ಇಸಾಕನ ತಂದೆ. ಇಸಾಕನು ಯಾಕೋಬನ ತಂದೆ. ಯಾಕೋಬನು ಯೆಹೂದ ಮತ್ತು ಅವನ ಸಹೋದರರ ತಂದೆ.


ಅಬ್ರಹಾಮನ ಗಂಡುಮಕ್ಕಳು: ಇಸಾಕ್ ಮತ್ತು ಇಷ್ಮಾಯೇಲ್,


ಮಿದ್ಯಾನನ ಗಂಡುಮಕ್ಕಳು ಯಾರೆಂದರೆ: ಏಫ, ಏಫೆರ್, ಹನೋಕ್, ಅಬೀದ ಮತ್ತು ಎಲ್ದಾಯ. ಇವರು ಕೆಟೂರಳ ಸಂತತಿಯವರು.


ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು.


ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು