Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:12 - ಪರಿಶುದ್ದ ಬೈಬಲ್‌

12 ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರಲ್ಲಿದ್ದ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು ಅವರ ಎಲುಬುಗಳನ್ನು ಅಲ್ಲಿದ್ದ ಏಲಾವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:12
10 ತಿಳಿವುಗಳ ಹೋಲಿಕೆ  

ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.


ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.


ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.


ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.


ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.


ಫಿಲಿಷ್ಟಿಯರು ಸೌಲನಿಗೆ ಮಾಡಿದ್ದು ಯಾಬೇಷ್ ಗಿಲ್ಯಾದಿನ ಜನರಿಗೆ ತಿಳಿಯಿತು.


ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.


ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಯಾದಿನ ಯಾಬೇಷ್ ಜನರಿಗೆ ನಾಳೆ ನಡುಮಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು. ಯಾಬೇಷಿನ ಜನರಿಗೆ ಸೌಲನ ಸಂದೇಶವನ್ನು ಸಂದೇಶಕರು ತಿಳಿಸಿದರು. ಯಾಬೇಷಿನ ಜನರು ಹರ್ಷಿತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು