Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:13 - ಪರಿಶುದ್ದ ಬೈಬಲ್‌

13 ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:13
18 ತಿಳಿವುಗಳ ಹೋಲಿಕೆ  

“ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.


“ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ.


“ಮಾಟಗಾರ್ತಿಯನ್ನು ನೀವು ಜೀವಸಹಿತ ಉಳಿಸಬಾರದು.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.


ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ ದ್ರೋಹಿಗಳಾದರೋ ನಿರಾಶರಾಗುವರು. ಅವರಿಗೆ ಏನೂ ದೊರೆಯುವುದಿಲ್ಲ.


ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.


ದುಷ್ಟರಾದರೋ ಸ್ವದೇಶದಿಂದ ತೆಗೆದುಹಾಕಲ್ಪಡುವರು; ದ್ರೋಹಿಗಳು ನಿರ್ಮೂಲವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು