Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:14 - ಪರಿಶುದ್ದ ಬೈಬಲ್‌

14 ಅಲ್ಲದೆ ಅವನು ಯೆಹೋವನ ಸಲಹೆಯನ್ನು ಪಡೆದುಕೊಳ್ಳುವ ಬದಲಾಗಿ ಮಾಟಮಂತ್ರ ಮಾಡುವ ಹೆಂಗಸಿನ ಬಳಿಗೆ ಹೋದನು. ಆದ್ದರಿಂದಲೇ ಯೆಹೋವನು ರಾಜ್ಯವನ್ನು ಸೌಲನಿಂದ ತೆಗೆದು ಇಷಯನ ಮಗನಾದ ದಾವೀದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ಸರ್ವೇಶ್ವರ ಅವನನ್ನು ಕೊಲ್ಲಿಸಿ ಜೆಸ್ಸೆಯ ಮಗ ದಾವೀದನಿಗೆ ರಾಜ್ಯವನ್ನೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನನ್ನು ಕೊಲ್ಲಿಸಿ ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಅವನನ್ನು ಕೊಂದುಹಾಕಿ, ರಾಜ್ಯವನ್ನು ಇಷಯನ ಮಗನಾದ ದಾವೀದನ ಕಡೆಗೆ ತಿರುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:14
18 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.


ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.


ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ:


ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ಆ ನೆರೆಯವನು.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


“ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.


ನಿನಗೆ ಉಪಕಾರ ಮಾಡುವವರಿಗೆ ಅಪಕಾರ ಮಾಡಬೇಡ. ಇಲ್ಲವಾದರೆ ನಿನ್ನ ಜೀವಮಾನವೆಲ್ಲಾ ಕಷ್ಟಪಡುವೆ.


ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.


ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಸೌಲನು ರಾಜನಾಗಿದ್ದನು. ಆದರೆ ನಾನು ಅವನನ್ನು ತೆಗೆದುಹಾಕಿದೆನು. ಆದರೆ ನನ್ನ ಕೃಪೆ ನಿನ್ನ ಮಗನಿಂದ ತೊಲಗಿಹೋಗುವದಿಲ್ಲ.


ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ.


ಬೋವಜನು ಓಬೇದನ ತಂದೆ. ಓಬೇದನು ಇಷಯನ ತಂದೆ. ಇಷಯನು ಎಲೀಯಾಬನ ತಂದೆ. ಎಲೀಯಾಬನು ಇಷಯನ ಚೊಚ್ಚಲಮಗನು; ಎರಡನೆಯವನು ಅಬೀನಾದಾಬ್; ಮೂರನೆಯವನು ಶಿಮ್ಮ;


ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು