Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:2 - ಪರಿಶುದ್ದ ಬೈಬಲ್‌

2 ಫಿಲಿಷ್ಟಿಯರು ಸೌಲನನ್ನು ಬೆನ್ನಟ್ಟುತ್ತಾ ಹೋಗಿ ಕೊನೆಗೆ ಸೌಲನನ್ನೂ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ಕೀಷೂವನನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಫಿಲಿಷ್ಟಿಯರು ಅವರನ್ನು ಬೆನ್ನಟ್ಟಿ ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ, ಮಲ್ಕೀಷೂವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫಿಲಿಷ್ಟಿಯರು ಸೌಲನನ್ನೂ, ಅವನ ಪುತ್ರರನ್ನೂ ಬಿಡದೆ ಬೆನ್ನಟ್ಟಿ, ಸೌಲನ ಪುತ್ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ, ಮಲ್ಕೀಷೂವನನ್ನೂ ಕೊಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:2
11 ತಿಳಿವುಗಳ ಹೋಲಿಕೆ  

ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ್.


ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳರ ತಂದೆ.


ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.


ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.


ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ವಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಾಬ್, ಸೌಲನ ಕಿರಿಯ ಮಗಳ ಹೆಸರು ಮೀಕಲ್.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ ಮತ್ತು ಮಲ್ಕೀಷೂವ ಎಂಬವರನ್ನು ಫಿಲಿಷ್ಟಿಯರು ಕೊಂದರು.


ಸೌಲನ ಸುತ್ತಲೂ ಯುದ್ಧವು ಬಹು ಘೋರವಾಗಿ ನಡೆಯಿತು. ಬಿಲ್ಲುಗಾರರು ತಮ್ಮ ಬಿಲ್ಲುಗಳಿಂದ ಸೌಲನ ಕಡೆಗೆ ಗುರಿಯಿಟ್ಟು ಹೊಡೆದು ಅವನನ್ನು ಗಾಯಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು