Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:3 - ಪರಿಶುದ್ದ ಬೈಬಲ್‌

3 ಸೌಲನ ಸುತ್ತಲೂ ಯುದ್ಧವು ಬಹು ಘೋರವಾಗಿ ನಡೆಯಿತು. ಬಿಲ್ಲುಗಾರರು ತಮ್ಮ ಬಿಲ್ಲುಗಳಿಂದ ಸೌಲನ ಕಡೆಗೆ ಗುರಿಯಿಟ್ಟು ಹೊಡೆದು ಅವನನ್ನು ಗಾಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಘೋರ ಯುದ್ಧದ ಮಧ್ಯದಲ್ಲಿ ಸೌಲನು ತಪ್ಪಿಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ವೈರಿ ಬಾಣವು ಅವನಿಗೆ ತಾಕಲು ಅವನು ತೀವ್ರ ಗಾಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು; ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:3
6 ತಿಳಿವುಗಳ ಹೋಲಿಕೆ  

ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.


ಫಿಲಿಷ್ಟಿಯರು ಸೌಲನನ್ನು ಬೆನ್ನಟ್ಟುತ್ತಾ ಹೋಗಿ ಕೊನೆಗೆ ಸೌಲನನ್ನೂ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.


ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಖಡ್ಗದಿಂದ ನನ್ನನ್ನು ಇರಿದು ಕೊಂದುಹಾಕು. ಆಗ ಪರದೇಶಿಯರು ಬಂದು ನನ್ನನ್ನು ಗಾಯಪಡಿಸಿ ಹಾಸ್ಯಮಾಡಲು ಸಾಧ್ಯವಾಗುವುದಿಲ್ಲ” ಎಂದನು. ಆದರೆ ಅವನ ಆಯುಧಹೊರುವವನು ಅದಕ್ಕೆ ಒಪ್ಪಲಿಲ್ಲ; ಸೌಲನನ್ನು ಕೊಲ್ಲಲು ಅವನು ಹೆದರಿದನು. ಆಗ ಸೌಲನು ತನ್ನ ಖಡ್ಗದ ಮೇಲೆ ತಾನೇ ಬಿದ್ದು ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು