Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:4 - ಪರಿಶುದ್ದ ಬೈಬಲ್‌

4 ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಖಡ್ಗದಿಂದ ನನ್ನನ್ನು ಇರಿದು ಕೊಂದುಹಾಕು. ಆಗ ಪರದೇಶಿಯರು ಬಂದು ನನ್ನನ್ನು ಗಾಯಪಡಿಸಿ ಹಾಸ್ಯಮಾಡಲು ಸಾಧ್ಯವಾಗುವುದಿಲ್ಲ” ಎಂದನು. ಆದರೆ ಅವನ ಆಯುಧಹೊರುವವನು ಅದಕ್ಕೆ ಒಪ್ಪಲಿಲ್ಲ; ಸೌಲನನ್ನು ಕೊಲ್ಲಲು ಅವನು ಹೆದರಿದನು. ಆಗ ಸೌಲನು ತನ್ನ ಖಡ್ಗದ ಮೇಲೆ ತಾನೇ ಬಿದ್ದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು” ಎಂದು ಹೇಳಲು ಅವನು ಹೆದರಿ ಹಿಂಜರಿದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಅವನು ತನ್ನ ಆಯುಧವಾಹಕ ಯುವಕನನ್ನು ಕರೆದು, ‘ದೇವರಲ್ಲಿ ನಂಬಿಕೆ ಇಲ್ಲದ ಈ ಫಿಲಿಷ್ಟಿಯರ ಹಸ್ತಗಳಿಂದ ನಾನು ಸಾಯಬಾರದು. ನಿನ್ನ ಖಡ್ಗವನ್ನು ಹಿಡಿದು ನನ್ನನ್ನು ಕೊಂದುಬಿಡು’, ಎಂದನು. ಆದರೆ ಆ ಯುವಕನು ಭಯಗೊಂಡು ಹಿಂಜರಿದನು. ಸೌಲನು ತನ್ನ ಖಡ್ಗವನ್ನೇ ಎತ್ತಿಟ್ಟು ಅದರ ಮೇಲೆ ಹಾರಿಬಿದ್ದು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದದರಿಂದ ಸೌಲನು ಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿಯನ್ನುಂಟು ಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಸೌಲನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ, ನೀನು ನಿನ್ನ ಖಡ್ಗವನ್ನು ಹಿರಿದು ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:4
19 ತಿಳಿವುಗಳ ಹೋಲಿಕೆ  

ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.


ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ


(ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.


ಅವನ ಆಯುಧ ಹೊರುವವನು ಸೌಲನು ಸತ್ತದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡನು.


ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಗತ್‌ನಲ್ಲಿ ಈ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ಆ ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.


ಸಂಸೋನನಿಗೆ ತುಂಬ ನೀರಡಿಕೆಯಾಗಿತ್ತು. ಅವನು ಯೆಹೋವನಿಗೆ, “ನಾನು ನಿನ್ನ ಸೇವಕನಾಗಿದ್ದೇನೆ. ನೀನು ನನಗೆ ಈ ಮಹಾವಿಜಯವನ್ನು ಕೊಟ್ಟಿರುವೆ. ದಯವಿಟ್ಟು ಈಗ ನಾನು ನೀರಡಿಕೆಯಿಂದ ಸಾಯಲು ಬಿಡಬೇಡ. ಸುನ್ನತಿ ಮಾಡಿಸಿಕೊಂಡಿಲ್ಲದವರು ನನ್ನನ್ನು ಹಿಡಿದುಕೊಡುವಂತೆ ಮಾಡಬೇಡ” ಎಂದು ಪ್ರಾರ್ಥಿಸಿದನು.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


ಅದಕ್ಕೆ ಆ ಯುವಕನು, “ನಾನು ಆಕಸ್ಮಿಕವಾಗಿ ಗಿಲ್ಬೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು.


ಸೌಲನ ಸುತ್ತಲೂ ಯುದ್ಧವು ಬಹು ಘೋರವಾಗಿ ನಡೆಯಿತು. ಬಿಲ್ಲುಗಾರರು ತಮ್ಮ ಬಿಲ್ಲುಗಳಿಂದ ಸೌಲನ ಕಡೆಗೆ ಗುರಿಯಿಟ್ಟು ಹೊಡೆದು ಅವನನ್ನು ಗಾಯಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು