Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:1 - ಪರಿಶುದ್ದ ಬೈಬಲ್‌

1 ಎಲ್ಲಾ ಇಸ್ರೇಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವು ನಿನ್ನ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಜನರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನೀವು ನಮ್ಮ ರಕ್ತಸಂಬಂಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಇಸ್ರಾಯೇಲ್ಯರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಕೂಡಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೆಲ್ಲರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ಇಗೋ, ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:1
11 ತಿಳಿವುಗಳ ಹೋಲಿಕೆ  

ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು.


ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.


ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.


ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು.


ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು.


ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ.


ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು