Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:10 - ಪರಿಶುದ್ದ ಬೈಬಲ್‌

10 ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಈ ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:10
13 ತಿಳಿವುಗಳ ಹೋಲಿಕೆ  

ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.


ಇವರೆಲ್ಲರೂ ಧೈರ್ಯಶಾಲಿ ಯೋಧರಾಗಿದ್ದರು. ಇವರೆಲ್ಲಾ ದಾವೀದನನ್ನು ಅರಸನನ್ನಾಗಿ ಮಾಡುವ ಉದ್ದೇಶದಿಂದ ಹೆಬ್ರೋನಿಗೆ ಬಂದರು. ದಾವೀದನು ತಮ್ಮ ಅರಸನಾಗುವುದಕ್ಕೆ ಇಸ್ರೇಲಿನ ಬೇರೆ ಜನರೆಲ್ಲರೂ ಒಪ್ಪಿಗೆಕೊಟ್ಟರು.


ಅಬ್ನೇರನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ನಾನು ಹೋಗಿ ಎಲ್ಲಾ ಇಸ್ರೇಲರನ್ನೂ ನಿನ್ನ ಬಳಿಗೆ ಕರೆತರುತ್ತೇನೆ; ನಂತರ ಅವರು ನಿನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಳ್ಳುತ್ತಾರೆ. ನೀನು ನಿನ್ನ ಇಷ್ಟದಂತೆ ಸಮಸ್ತ ಇಸ್ರೇಲನ್ನು ಆಳಬಹುದು” ಎಂದು ಹೇಳಿದನು. ದಾವೀದನು ಅಬ್ನೇರನನ್ನು ಕಳುಹಿಸಿದನು. ಅಬ್ನೇರನು ಸಮಾಧಾನದಿಂದ ಹೋದನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ:


ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.


ದಾವೀದನು ದುಷ್ಟ ಜನರ ವಿರುದ್ಧವಾಗಿ ಮಾಡಿದ ಯುದ್ಧದಲ್ಲಿ ಅವರು ಸಹಾಯಮಾಡಿದರು. ಈ ದುಷ್ಟ ಜನರು ದೇಶದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾ ದರೋಡೆ ಮಾಡುತ್ತಿದ್ದರು. ಮನಸ್ಸೆಕುಲದಿಂದ ಸೇರಿದ ಜನರೆಲ್ಲಾ ಧೈರ್ಯಶಾಲಿಗಳಾಗಿದ್ದರು. ಅವರು ದಾವೀದನ ಸೈನ್ಯದಲ್ಲಿ ಅಧಿಕಾರಿಗಳಾದರು.


ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.


ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.


ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ. ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು, ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಪುರುಷರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು