Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:19 - ಪರಿಶುದ್ದ ಬೈಬಲ್‌

19 “ದೇವರೇ, ನಾನು ಈ ನೀರನ್ನು ಕುಡಿಯಲಾರೆನು. ಯಾಕೆಂದರೆ ನನಗಾಗಿ ತಮ್ಮ ಪ್ರಾಣ ಕೊಡಲು ಹೆದರದೆ ನೀರನ್ನು ತಂದವರ ರಕ್ತವಿದು” ಎಂದು ದಾವೀದನು ಅರಿಕೆಮಾಡಿ ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ರೀತಿಯಾಗಿ ಅನೇಕ ಪರಾಕ್ರಮದ ಕಾರ್ಯಗಳನ್ನು ಈ ಮೂರು ಮಂದಿ ವೀರರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದಾವೀದನು ಆ ನೀರನ್ನು ಕುಡಿಯದೇ ಸರ್ವೇಶ್ವರನಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಈ ಮೂರು ಮಂದಿ ರಣವೀರರು ಸಾಧಿಸಿದ ಪರಾಕ್ರಮವಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಅವನು ಅದನ್ನು ಕುಡಿಯಲೊಲ್ಲದೆ - ತಮ್ಮ ಜೀವವನ್ನು ಸಮರ್ಪಿಸಿದ ಈ ಪುರುಷರ ರಕ್ತವನ್ನು ನಾನು ಕುಡಿಯಲೋ! ನನ್ನ ದೇವರು ಈ ಕಾರ್ಯವನ್ನು ನನಗೆ ದೂರಮಾಡಲಿ. ಅವರು ತಮ್ಮ ಜೀವವನ್ನೇ ಸಮರ್ಪಿಸಿ ಇದನ್ನು ತಂದುಕೊಟ್ಟರು. ನಾನು ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗಿ ಮಾಡಲಿ. ನಾನು ಈ ಮನುಷ್ಯರ ಪ್ರಾಣದ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣದಾಶೆ ತೊರೆದು ಈ ನೀರನ್ನು ತಂದರಲ್ಲಾ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:19
16 ತಿಳಿವುಗಳ ಹೋಲಿಕೆ  

ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.


“ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.


ನಮ್ಮ ವಿಷಯವೇನು? ನಾವು ನಮ್ಮನ್ನು ಪ್ರತಿ ತಾಸಿನಲ್ಲಿಯೂ ಅಪಾಯಕ್ಕೆ ಒಡ್ಡುವುದು ಏಕೆ?


ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.


ನನ್ನ ದೇಹವು ನಿಜವಾದ ಆಹಾರವಾಗಿದೆ. ನನ್ನ ರಕ್ತವು ನಿಜವಾದ ಪಾನೀಯವಾಗಿದೆ.


ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು.


“ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಯುದ್ಧ ಮಾಡಿದರು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು.


ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.


ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು