Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:21 - ಪರಿಶುದ್ದ ಬೈಬಲ್‌

21 ಅಬ್ಷೈಯು ಮೂವತ್ತು ಮಂದಿ ರಣವೀರರಿಗಿಂತಲೂ ಎರಡರಷ್ಟು ಪರಾಕ್ರಮಿಯಾಗಿದ್ದನು. ಅವನು ಅವರಿಗೆ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಈ ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾದುದಲ್ಲದೇ ಅದರ ನಾಯಕನೂ ಆದನು. ಆದರೆ ‘ಮೂವರು ಪ್ರಮುಖ ವೀರರು’ ಎಂಬ ಪಡೆಯವರಷ್ಟು ಪ್ರಸಿದ್ಧನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಉಳಿದ ಇಬ್ಬರಿಗಿಂತ ಇವನೇ ಘನವಾದವನಾದದರಿಂದ ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು; ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:21
6 ತಿಳಿವುಗಳ ಹೋಲಿಕೆ  

ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ.


ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.


ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.


ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು.


ಬೆನಾಯನು ಯೆಹೋಯಾದನ ಮಗ. ಇವನು ಕಬ್ಜಯೇಲಿನಿಂದ ಬಂದವನು. ಇವನು ತುಂಬಾ ಶಕ್ತಿಶಾಲಿಯಾಗಿದ್ದನು. ಮೋವಾಬ್ಯರಲ್ಲಿ ಹೆಸರುವಾಸಿಯಾದ ಇಬ್ಬರು ಪರಾಕ್ರಮಶಾಲಿಗಳನ್ನು ಇವನು ಕೊಂದನು. ಒಂದು ದಿವಸ ಹಿಮ ಸುರಿಯುತ್ತಿರುವಾಗಲೇ ಗುಂಡಿಯೊಳಗೆ ಬಿದ್ದಿದ್ದ ಸಿಂಹವನ್ನು ಒಬ್ಬನೇ ಕೊಂದುಹಾಕಿದನು.


ದಾವೀದನು ದುಷ್ಟ ಜನರ ವಿರುದ್ಧವಾಗಿ ಮಾಡಿದ ಯುದ್ಧದಲ್ಲಿ ಅವರು ಸಹಾಯಮಾಡಿದರು. ಈ ದುಷ್ಟ ಜನರು ದೇಶದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾ ದರೋಡೆ ಮಾಡುತ್ತಿದ್ದರು. ಮನಸ್ಸೆಕುಲದಿಂದ ಸೇರಿದ ಜನರೆಲ್ಲಾ ಧೈರ್ಯಶಾಲಿಗಳಾಗಿದ್ದರು. ಅವರು ದಾವೀದನ ಸೈನ್ಯದಲ್ಲಿ ಅಧಿಕಾರಿಗಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು