1 ಪೂರ್ವಕಾಲ ವೃತ್ತಾಂತ 11:23 - ಪರಿಶುದ್ದ ಬೈಬಲ್23 ಈಜಿಪ್ಟಿನಲ್ಲಿ ಅತ್ಯಂತ ಎತ್ತರವಾಗಿದ್ದ ಮಹಾಸೈನಿಕನೊಬ್ಬನನ್ನು ಬೆನಾಯನು ಕೊಂದುಹಾಕಿದನು. ಅವನು ಏಳೂವರೆ ಅಡಿ ಎತ್ತರವಾಗಿದ್ದನು. ಅವನ ಕೈಯಲ್ಲಿದ್ದ ಈಟಿಯು ದೊಡ್ಡ ಕಂಬದಂತೆ ಇತ್ತು. ಬೆನಾಯನ ಕೈಯಲ್ಲಿ ಒಂದು ದೊಣ್ಣೆಮಾತ್ರ ಇತ್ತು. ಬೆನಾಯನು ಅವನ ಹತ್ತಿರ ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇನ್ನೊಮ್ಮೆ ಏಳುವರೆ ಅಡಿ ಎತ್ತರದ, ಅತೀ ಬಲವಾದ ಈಟಿಯನ್ನು ಹೊಂದಿದ್ದ, ಬಲಾಢ್ಯನಾದ ಈಜಿಪ್ಟನೊಬ್ಬನನ್ನು ಸೋಲಿಸಿದನು. ಆ ಈಜಿಪ್ಟಿನವನ ಕೈಯಲ್ಲಿ ಬಲವಾದ ಈಟಿ ಇತ್ತು. ಇವನಾದರೋ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ, ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮತ್ತೊಮ್ಮೆ ಐದು ಮೊಳ ಎತ್ತರವಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನು ಏಳುವರೆ ಅಡಿ ಎತ್ತರವಾಗಿದ್ದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು; ಆ ಈಜಿಪ್ಟಿನವನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಷ್ಟು ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ, ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |