Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:24 - ಪರಿಶುದ್ದ ಬೈಬಲ್‌

24 ಇಂಥಾ ಅನೇಕ ಪರಾಕ್ರಮದ ಕೃತ್ಯಗಳನ್ನು ಯೆಹೋಯಾದನ ಮಗನಾದ ಬೆನಾಯನು ಮಾಡಿದ್ದನು. ಆ ಮೂರು ಮಂದಿ ವೀರರಂತೆಯೇ ಇವನೂ ಹೆಸರುವಾಸಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಮೂವತ್ತು ಪ್ರಮುಖ ವೀರರು’ ಪಡೆಯ ಒಬ್ಬನಾದ ಬೆನಾಯ ಮಾಡಿದ ಶೂರಕೃತ್ಯ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ಪರಾಕ್ರಮಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:24
5 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಈಜಿಪ್ಟಿನಲ್ಲಿ ಅತ್ಯಂತ ಎತ್ತರವಾಗಿದ್ದ ಮಹಾಸೈನಿಕನೊಬ್ಬನನ್ನು ಬೆನಾಯನು ಕೊಂದುಹಾಕಿದನು. ಅವನು ಏಳೂವರೆ ಅಡಿ ಎತ್ತರವಾಗಿದ್ದನು. ಅವನ ಕೈಯಲ್ಲಿದ್ದ ಈಟಿಯು ದೊಡ್ಡ ಕಂಬದಂತೆ ಇತ್ತು. ಬೆನಾಯನ ಕೈಯಲ್ಲಿ ಒಂದು ದೊಣ್ಣೆಮಾತ್ರ ಇತ್ತು. ಬೆನಾಯನು ಅವನ ಹತ್ತಿರ ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಾಯಿಸಿದನು.


ಬೆನಾಯನು ಮೂವತ್ತು ಪರಾಕ್ರಮಿಗಳಿಗಿಂತಲೂ ಹೆಚ್ಚು ಹೆಸರುವಾಸಿಯಾಗಿದ್ದನು. ಆದರೆ ಇವನು ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ಇವನನ್ನು ಅಂಗರಕ್ಷಕರಿಗೆ ನಾಯಕನನ್ನಾಗಿ ಮಾಡಿದನು.


ದಾವೀದನು ಚಿಕ್ಲಗಿನಲ್ಲಿದ್ದಾಗ ಕೆಲವು ಪರಾಕ್ರಮಶಾಲಿಗಳು ಬಂದು ದಾವೀದನೊಂದಿಗೆ ಸೇರಿಕೊಂಡರು. ಕೀಷನ ಮಗನಾದ ಸೌಲನಿಂದ ತಪ್ಪಿಸಿಕೊಳ್ಳಲು ದಾವೀದನು ಚಿಕ್ಲಗಿನಲ್ಲಿ ಅಡಗಿಕೊಂಡಿದ್ದನು. ಇವರು ಯುದ್ಧದಲ್ಲಿ ದಾವೀದನಿಗೆ ನೆರವಾದರು.


ಆ ಗುಂಪಿನಲ್ಲಿ ಚಾದೋಕನೂ ಇದ್ದನು. ಇವನೂ ಪರಾಕ್ರಮಶಾಲಿಯಾಗಿದ್ದನು. ಇವನು ತನ್ನ ಇಪ್ಪತ್ತೆರಡು ಮಂದಿ ಅಧಿಕಾರಿಗಳೊಂದಿಗೆ ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು