Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:5 - ಪರಿಶುದ್ದ ಬೈಬಲ್‌

5 “ನೀನು ನಮ್ಮ ಪಟ್ಟಣದೊಳಗೆ ಬರಲು ಸಾಧ್ಯವೇ ಇಲ್ಲ” ಎಂದು ಹೇಳಿದರು. ಆದರೆ ದಾವೀದನು ಅವರನ್ನು ಸೋಲಿಸಿ ಚೀಯೋನ್ ಕೋಟೆಯನ್ನು ಗೆದ್ದುಕೊಂಡನು. ಅಂದಿನಿಂದ ಆ ಸ್ಥಳವು ದಾವೀದನ ನಗರವೆಂದು ಕರೆಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನು ಪಟ್ಟಣದೊಳಗೆ ಪ್ರವೇಶಿಸಲು ಎಂದಿಗೂ ಸಾಧ್ಯವಿಲ್ಲವೆಂದು ಯೆಬೂಸಿಯರು ಹೇಳಿದ್ದರು. ಆದರೂ ದಾವೀದನು ಪಟ್ಟಣವನ್ನು ಪ್ರವೇಶಿಸಿ ಸಿಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಅದು ‘ದಾವೀದ್ ನಗರ’ ಎಂದು ಹೆಸರು ಪಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ದಾವೀದನಿಗೆ - ನೀನು ಒಳಗೆ ಬರಲಾರಿ ಎಂದು ಹೇಳಿದರು. ಆದರೂ ಅವನು ದಾವೀದ ನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ದೇಶದ ಮೂಲನಿವಾಸಿಗಳಾದ ಯೆಬೂಸಿಯರು ದಾವೀದನಿಗೆ, “ನೀನು ಇದರೊಳಗೆ ಬರಲು ಸಾಧ್ಯವಿಲ್ಲ,” ಎಂದರು. ಆದರೂ ದಾವೀದನು, ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:5
26 ತಿಳಿವುಗಳ ಹೋಲಿಕೆ  

ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”


ಯೆಹೋವನು ತನ್ನ ಆಲಯಕ್ಕಾಗಿ ಚೀಯೋನನ್ನೇ ಆರಿಸಿಕೊಂಡನು.


ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು.


ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು.


ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.


ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ.


ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.


ದಾವೀದನು ಕೋಟೆಯೊಳಗೆ ತನಗೆ ಮನೆ ಮಾಡಿಕೊಂಡನು. ಆದ್ದರಿಂದ ಅದಕ್ಕೆ ದಾವೀದನಗರ ಎಂಬ ಹೆಸರು ಬಂತು.


ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.


ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.


ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.


ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ,


“ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚೆರೂಯಳ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು