Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:6 - ಪರಿಶುದ್ದ ಬೈಬಲ್‌

6 “ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚೆರೂಯಳ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ದಿವಸ ದಾವೀದನು - ಯೆಬೂಸಿಯರನ್ನು ಯಾವನು ಮೊದಲು ಸೋಲಿಸುವನೋ ಅವನು ಪ್ರಮುಖನೂ ದಳಪತಿಯೂ ಆಗುವನು ಎಂದು ಹೇಳಲು ಚೆರೂಯಳ ಮಗನಾದ ಯೋವಾಬನು ಮೊದಲು ಹತ್ತಿದ್ದರಿಂದ ಅವನೇ ಪ್ರಮುಖನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:6
13 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಯೋವಾಬನು ಅವನ ಸೈನ್ಯದ ಅಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.


ಯೋವಾಬನು ಇಸ್ರೇಲಿನ ಸೈನ್ಯಕ್ಕೆಲ್ಲ ಮುಖ್ಯ ಸೇನಾಪತಿಯಾಗಿದ್ದನು. ಕೆರೇತ್ಯರಿಗೆ ಮತ್ತು ಪೆಲೇತ್ಯರಿಗೆ ಯೆಹೋಯಾದಾವನ ಮಗನಾದ ಬೆನಾಯನು ಅಧಿಪತಿಯಾಗಿದ್ದನು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.


ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.


ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.


ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.


“ನೀನು ನಮ್ಮ ಪಟ್ಟಣದೊಳಗೆ ಬರಲು ಸಾಧ್ಯವೇ ಇಲ್ಲ” ಎಂದು ಹೇಳಿದರು. ಆದರೆ ದಾವೀದನು ಅವರನ್ನು ಸೋಲಿಸಿ ಚೀಯೋನ್ ಕೋಟೆಯನ್ನು ಗೆದ್ದುಕೊಂಡನು. ಅಂದಿನಿಂದ ಆ ಸ್ಥಳವು ದಾವೀದನ ನಗರವೆಂದು ಕರೆಯಲ್ಪಟ್ಟಿತು.


ದಾವೀದನು ಕೋಟೆಯೊಳಗೆ ತನಗೆ ಮನೆ ಮಾಡಿಕೊಂಡನು. ಆದ್ದರಿಂದ ಅದಕ್ಕೆ ದಾವೀದನಗರ ಎಂಬ ಹೆಸರು ಬಂತು.


ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು.


ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು.


ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು