1 ಪೂರ್ವಕಾಲ ವೃತ್ತಾಂತ 12:18 - ಪರಿಶುದ್ದ ಬೈಬಲ್18 ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು. ಅಧ್ಯಾಯವನ್ನು ನೋಡಿ |
“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.
ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.