1 ಪೂರ್ವಕಾಲ ವೃತ್ತಾಂತ 12:23 - ಪರಿಶುದ್ದ ಬೈಬಲ್23 ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರಸ್ವಾಮಿ ವಾಗ್ದಾನ ಮಾಡಿದಂತೆ ಸೌಲನಿಗೆ ಬದಲಾಗಿ ದಾವೀದನನ್ನು ಅರಸನನ್ನಾಗಿ ಮಾಡಲು, ಅನೇಕ ಸಿದ್ಧಸೈನಿಕರು ಹೆಬ್ರೋನಿಗೆ ಬಂದು ದಾವೀದನ ಸೈನ್ಯದಲ್ಲಿ ಸೇರಿದರು. ಅವರ ಸಂಖ್ಯೆಗಳು ಈ ಕೆಳಕಂಡಂತಿವೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪು ಗುಂಪುಗಳಾಗಿ ಬಂದ ಯುದ್ಧಸನ್ನದ್ಧರ ಲೆಕ್ಕ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು: ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.