Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:28 - ಪರಿಶುದ್ದ ಬೈಬಲ್‌

28 ಆ ಗುಂಪಿನಲ್ಲಿ ಚಾದೋಕನೂ ಇದ್ದನು. ಇವನೂ ಪರಾಕ್ರಮಶಾಲಿಯಾಗಿದ್ದನು. ಇವನು ತನ್ನ ಇಪ್ಪತ್ತೆರಡು ಮಂದಿ ಅಧಿಕಾರಿಗಳೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪರಾಕ್ರಮಶಾಲಿಯಾದ ಯುವಕ ಚಾದೋಕ ಮತ್ತು ಅವನ ಬಂಧುಗಳಾದ 22 ಮಂದಿ ಅಧಿಪತಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ ಅವನ ಕುಟುಂಬದವರಾದ ಇಪ್ಪತ್ತೆರಡು ಮಂದಿ ಅಧಿಪತಿಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಬಲವುಳ್ಳ ಪರಾಕ್ರಮಶಾಲಿಯಾದ ಪ್ರಾಯಸ್ತನಾಗಿದ್ದ ಚಾದೋಕನೂ, ಅವನ ತಂದೆಯ ಮನೆಯಿಂದ 22 ಮಂದಿ ಪ್ರಧಾನರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:28
11 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗ ಚಾದೋಕ. ಚಾದೋಕನ ಮಗ ಅಹೀಮಾಚ.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಚಾದೋಕ್ ಅಹೀಟೂಬನ ಮಗ, ಅಹಿಮಾಚನು ಚಾದೋಕನ ಮಗ.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.


ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ಯೆಹೋಯಾದಾವನು ಅವರಲ್ಲಿದ್ದನು. ಇವನು ಆರೋನನ ಕುಲಪ್ರಧಾನನಾಗಿದ್ದನು. ಇವನೊಂದಿಗೆ ಮೂರು ಸಾವಿರದ ಏಳುನೂರ ಮಂದಿ.


ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್.


ಬೆನಾಯನು ಯೆಹೋಯಾದನ ಮಗ. ಇವನು ಕಬ್ಜಯೇಲಿನಿಂದ ಬಂದವನು. ಇವನು ತುಂಬಾ ಶಕ್ತಿಶಾಲಿಯಾಗಿದ್ದನು. ಮೋವಾಬ್ಯರಲ್ಲಿ ಹೆಸರುವಾಸಿಯಾದ ಇಬ್ಬರು ಪರಾಕ್ರಮಶಾಲಿಗಳನ್ನು ಇವನು ಕೊಂದನು. ಒಂದು ದಿವಸ ಹಿಮ ಸುರಿಯುತ್ತಿರುವಾಗಲೇ ಗುಂಡಿಯೊಳಗೆ ಬಿದ್ದಿದ್ದ ಸಿಂಹವನ್ನು ಒಬ್ಬನೇ ಕೊಂದುಹಾಕಿದನು.


ಇಂಥಾ ಅನೇಕ ಪರಾಕ್ರಮದ ಕೃತ್ಯಗಳನ್ನು ಯೆಹೋಯಾದನ ಮಗನಾದ ಬೆನಾಯನು ಮಾಡಿದ್ದನು. ಆ ಮೂರು ಮಂದಿ ವೀರರಂತೆಯೇ ಇವನೂ ಹೆಸರುವಾಸಿಯಾಗಿದ್ದನು.


ಮೂರನೆಯ ಸೈನ್ಯಾಧಿಪತಿಯು ಬೆನಾಯ. ಇವನು ಯೆಹೋಯಾದನ ಮಗನಾಗಿದ್ದನು. ಇವನು ಮಹಾಯಾಜಕನಾಗಿದ್ದನು. ಇವನೊಂದಿಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಕಾಲಾಳುಗಳು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು