1 ಪೂರ್ವಕಾಲ ವೃತ್ತಾಂತ 12:38 - ಪರಿಶುದ್ದ ಬೈಬಲ್38 ಇವರೆಲ್ಲರೂ ಧೈರ್ಯಶಾಲಿ ಯೋಧರಾಗಿದ್ದರು. ಇವರೆಲ್ಲಾ ದಾವೀದನನ್ನು ಅರಸನನ್ನಾಗಿ ಮಾಡುವ ಉದ್ದೇಶದಿಂದ ಹೆಬ್ರೋನಿಗೆ ಬಂದರು. ದಾವೀದನು ತಮ್ಮ ಅರಸನಾಗುವುದಕ್ಕೆ ಇಸ್ರೇಲಿನ ಬೇರೆ ಜನರೆಲ್ಲರೂ ಒಪ್ಪಿಗೆಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯುದ್ಧಸನ್ನದ್ಧರಾದ ಈ ಎಲ್ಲಾ ಸೈನಿಕರು ಸಮಸ್ತ ಇಸ್ರಯೇಲರ ಮೇಲೆ ದಾವೀದನನ್ನು ಅರಸನನ್ನಾಗಿ ಮಾಡಲು ದೃಢನಿರ್ಧಾರ ಮಾಡಿಕೊಂಡು ಹೆಬ್ರೋನಿಗೆ ಹೋದರು. ಇಸ್ರಯೇಲರಲ್ಲಿ ಉಳಿದವರೆಲ್ಲರೂ ಇದೇ ಉದ್ದೇಶದಿಂದ ಒಂದಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ದಾವೀದನನ್ನು ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡುವದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲ್ಯರು ದಾವೀದನಿಗೆ ರಾಜ್ಯಾಭಿಷೇಕ ಮಾಡುವದರಲ್ಲಿ ಏಕಮನಸ್ಸುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿ |