1 ಪೂರ್ವಕಾಲ ವೃತ್ತಾಂತ 12:39 - ಪರಿಶುದ್ದ ಬೈಬಲ್39 ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವರುದಾವೀದನೊಂದಿಗೆ, ತಮ್ಮ ಸಹಬಾಂಧವರು ಸಿದ್ಧಪಡಿಸಿದ ಆಹಾರ ಪಾನೀಯಗಳನ್ನು ಸೇವಿಸುತ್ತಾ, ಮೂರು ದಿನಗಳನ್ನು ಕಳೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿ |
ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.