Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:8 - ಪರಿಶುದ್ದ ಬೈಬಲ್‌

8 ಅರಣ್ಯದಲ್ಲಿದ್ದ ಕೋಟೆಯಲ್ಲಿ ಗಾದ್ ಕುಲದ ಕೆಲವರು ದಾವೀದನನ್ನು ಸೇರಿಕೊಂಡರು. ಇವರು ಯುದ್ಧದಲ್ಲಿ ನುರಿತ ಸೈನಿಕರಾಗಿದ್ದರು. ಈಟಿ ಬರ್ಜಿಗಳಲ್ಲಿ ಪರಿಣಿತರು; ಸಿಂಹಗಳಂತೆ ಕ್ರೂರಿಗಳು; ಬೆಟ್ಟದ ಮೇಲೆ ಜಿಂಕೆಯ ತರಹ ವೇಗವಾಗಿ ಓಡಬಲ್ಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾವೀದನು ಮರುಭೂಮಿಯ ಕೋಟೆಯಲ್ಲಿದ್ದಾಗ ಅವನ ಪಡೆಗಳಲ್ಲಿ ಬಂದು ಸೇರಿದ ಗಾದ್ ಗೋತ್ರದ ಪ್ರಸಿದ್ಧರೂ ಅನುಭವಶಾಲಿಗಳೂ ಆದ ಯುದ್ಧವೀರರ ಹೆಸರುಗಳು: ಇವರು ನೋಡಲು ಸಿಂಹಗಳಂತೆ ಭೀಕರರೂ ಪರ್ವತದ ಜಿಂಕೆಗಳಂತೆ ಚುರುಕಾದವರೂ ಗುರಾಣಿ, ಈಟಿಗಳನ್ನು ಉಪಯೋಗಿಸುವುದರಲ್ಲಿ ನಿಪುಣರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಣವೀರರೂ ಯುದ್ಧನಿಪುಣರೂ ಗುರಾಣಿಬರ್ಜಿಗಳಲ್ಲಿ ಪ್ರವೀಣರೂ ಸಿಂಹಮುಖರೂ ಬೆಟ್ಟದ ಜಿಂಕೆಯಂತೆ ಪಾದತ್ವರಿತರೂ ಆಗಿದ್ದು ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಕೂಡಿಕೊಂಡ ಗಾದ್ಯರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಮರುಭೂಮಿಯಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ, ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು. ಅವರ ಮುಖಗಳು ಸಿಂಹಗಳಂತೆ ಭೀಕರವಾಗಿದ್ದವು. ಪರ್ವತಗಳ ಮೇಲೆ ಇವರು ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:8
17 ತಿಳಿವುಗಳ ಹೋಲಿಕೆ  

ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.


ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.


ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ.


ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.


ನನ್ನ ಪ್ರಿಯನೇ, ತ್ವರೆಪಡು. ಸುಗಂಧಸಸ್ಯ ಪರ್ವತಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆ ಆ ಸಾಲದ ಬಂಧನದಿಂದ ತಪ್ಪಿಸಿಕೊ. ಬಲೆಯಿಂದ ತಪ್ಪಿಸಿಕೊಂಡು ಹಾರುವ ಪಕ್ಷಿಯಂತೆ ನಿನ್ನನ್ನು ಬಿಡುಗಡೆ ಮಾಡಿಕೋ.


ಅಮಚ್ಯನು ಯೆಹೂದ ಪ್ರಾಂತ್ಯದ ಜನರನ್ನು ಒಟ್ಟುಗೂಡಿಸಿ ಅವರನ್ನು ಕುಟುಂಬಗಳಿಗನುಸಾರವಾಗಿ ವಿಭಾಗ ಮಾಡಿದನು. ಈ ಗುಂಪುಗಳಿಗೆ ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು. ಇವರು ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಗಳಲ್ಲಿ ಇಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರನ್ನು ಸೈನಿಕರನ್ನಾಗಿ ಆರಿಸಿದರು. ಒಟ್ಟು ಮೂರು ಲಕ್ಷ ಸೈನಿಕರು ಬರ್ಜಿ ಗುರಾಣಿಗಳೊಂದಿಗೆ ಯುದ್ಧ ಮಾಡಲು ನುರಿತರಾಗಿದ್ದರು.


ಬೆನ್ಯಾಮೀನ್ ಮತ್ತು ಯೆಹೂದ ಕುಲದ ಇತರ ಜನರೂ ದಾವೀದನು ಕೋಟೆಯಲ್ಲಿ ದಾವೀದನೊಂದಿಗೆ ಸೇರಿಕೊಂಡರು.


ಬೆನಾಯನು ಯೆಹೋಯಾದನ ಮಗ. ಇವನು ಕಬ್ಜಯೇಲಿನಿಂದ ಬಂದವನು. ಇವನು ತುಂಬಾ ಶಕ್ತಿಶಾಲಿಯಾಗಿದ್ದನು. ಮೋವಾಬ್ಯರಲ್ಲಿ ಹೆಸರುವಾಸಿಯಾದ ಇಬ್ಬರು ಪರಾಕ್ರಮಶಾಲಿಗಳನ್ನು ಇವನು ಕೊಂದನು. ಒಂದು ದಿವಸ ಹಿಮ ಸುರಿಯುತ್ತಿರುವಾಗಲೇ ಗುಂಡಿಯೊಳಗೆ ಬಿದ್ದಿದ್ದ ಸಿಂಹವನ್ನು ಒಬ್ಬನೇ ಕೊಂದುಹಾಕಿದನು.


ಇನ್ನೊಂದು ಸಮಯದಲ್ಲಿ ದಾವೀದನು ಕೋಟೆಯೊಳಗಿದ್ದನು. ಫಿಲಿಷ್ಟಿಯರ ಸೈನ್ಯ ಬೆತ್ಲೆಹೇಮಿನಲ್ಲಿತ್ತು.


“ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.


ಸೌಲನ ವಂಶದವರನ್ನು ಕೊಲ್ಲುವುದಿಲ್ಲವೆಂದು ದಾವೀದನು ಪ್ರಮಾಣಮಾಡಿದನು. ನಂತರ ಸೌಲನು ಮನೆಗೆ ಹಿಂದಿರುಗಿದನು. ದಾವೀದನು ಮತ್ತು ಅವನ ಜನರು ತಾವು ಅಡಗಿಕೊಂಡಿದ್ದ ಸ್ಥಳಕ್ಕೆ ಹೊರಟುಹೋದರು.


ದಾವೀದನು ಮಾವೋನ್ ಅರಣ್ಯವನ್ನು ಬಿಟ್ಟು ಏಂಗೆದಿಯ ಕೋಟೆಗಳಿಗೆ ಹೋದನು.


ದಾವೀದನು ಜೀಫ್ ಅರಣ್ಯದಲ್ಲಿರುವ ಬೆಟ್ಟಪ್ರದೇಶವಾದ ಆಶ್ರಯಗಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ.


ಗೆದೋರ್ ಊರಿನವನಾದ ಯೆರೋಹಾಮನ ಗಂಡುಮಕ್ಕಳಾದ ಯೋವೇಲ ಮತ್ತು ಜೆಬದ್ಯ.


ಗಾದ್ ಕುಲದ ಸೈನ್ಯಾಧಿಕಾರಿ ಏಜೆರ; ಎರಡನೆಯ ಅಧಿಕಾರಿ ಓಬದ್ಯ; ಎಲೀಯಾಬನು ಮೂರನೆಯ ಅಧಿಕಾರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು