1 ಪೂರ್ವಕಾಲ ವೃತ್ತಾಂತ 13:1 - ಪರಿಶುದ್ದ ಬೈಬಲ್1 ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ಸಹಸ್ರಾಧಿಪತಿ ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಮಾತಾಡಿದನಂತರ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನು ಸಾವಿರ ಮಂದಿಗೂ, ನೂರು ಮಂದಿಗೂ ಪ್ರಧಾನರಾದವರ ಸಂಗಡ, ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು. ಅಧ್ಯಾಯವನ್ನು ನೋಡಿ |
ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.
ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗೆಂದನು: “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.