Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:12 - ಪರಿಶುದ್ದ ಬೈಬಲ್‌

12 ಆ ದಿವಸದಲ್ಲಿ ದಾವೀದನು ಯೆಹೋವನಿಗೆ ತುಂಬಾ ಭಯಪಟ್ಟು, “ನಾನು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರಲು ಆಗುವುದಿಲ್ಲ” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ದಿವಸ ದಾವೀದನು ದೇವರಿಗೆ ಭಯಪಟ್ಟು - ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:12
12 ತಿಳಿವುಗಳ ಹೋಲಿಕೆ  

ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


“ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು.


“ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ, “ಪೆರೆಚ್‌ಉಜ್ಜ” ಎಂಬ ಹೆಸರೇ ಇದೆ.


ದಾವೀದನು ದೇವರಿಗೆ ಭಯಪಟ್ಟನು. ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಓಬೇದೆದೋಮನ ಮನೆಯಲ್ಲಿಯೇ ಬಿಟ್ಟನು. ಓಬೇದೆದೋಮನು ಗತ್ ಊರಿನವನು.


ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು