1 ಪೂರ್ವಕಾಲ ವೃತ್ತಾಂತ 13:2 - ಪರಿಶುದ್ದ ಬೈಬಲ್2 ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗೆಂದನು: “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ ಸಮಸ್ತಸಮೂಹದವರಿಗೆ - ನಿಮ್ಮ ಸಮ್ಮತಿಯೂ ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವದಾದರೆ ನಾವು ಎಲ್ಲಾ ಇಸ್ರಾಯೇಲ್‍ಪ್ರಾಂತಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಶೀಘ್ರವಾಗಿ ಕರೇಕಳುಹಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾವೀದನು ಇಸ್ರಾಯೇಲಿನ ಸಮಸ್ತ ಜನರಿಗೆ, “ನಿಮಗೆ ಒಳ್ಳೆಯದಾಗಿ ಕಂಡರೆ, ನಮ್ಮ ದೇವರಾದ ಯೆಹೋವ ದೇವರ ಚಿತ್ತವಾದರೆ, ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲದರಲ್ಲಿ ಉಳಿದಿರುವ ನಮ್ಮ ಸಹೋದರರನ್ನೂ, ತಮ್ಮ ಪಟ್ಟಣಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕರನ್ನೂ, ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೆಯಕಳುಹಿಸಿ, ಅಧ್ಯಾಯವನ್ನು ನೋಡಿ |
ಆದರೆ ರಾಜನಾದ ಯೋರಾಮನಿಗೆ ಅರಾಮ್ಯರು ಗಾಯಗೊಳಿಸಿದ್ದರಿಂದ ಅವನು ವಾಸಿಮಾಡಿಕೊಳ್ಳಲು ಇಜ್ರೇಲಿಗೆ ಹಿಂದಿರುಗಿ ಬಂದಿದ್ದನು. (ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯೋರಾಮನು ಹೋರಾಟ ಮಾಡಿದಾಗ ಅರಾಮ್ಯರು ಅವನನ್ನು ಗಾಯಗೊಳಿಸಿದ್ದರು.) ಯೇಹು ಅಧಿಕಾರಿಗಳಿಗೆ, “ನಾನು ನೂತನ ರಾಜನೆಂದು ನೀವು ಒಪ್ಪಿಕೊಂಡರೆ, ಈ ಸುದ್ದಿಯನ್ನು ಇಜ್ರೇಲಿನಲ್ಲಿ ಹೇಳಲು ಯಾರೂ ನಗರದಿಂದ ತಪ್ಪಿಸಿಕೊಂಡು ಹೋಗಲು ಅವಕಾಶ ಕೊಡದಿರಿ” ಎಂದು ಹೇಳಿದನು.